ಅಂತರರಾಜ್ಯ ಗಾಂಜಾ ಗ್ಯಾಂಗ್ ಬಂಧನ

inter state ganja gang arrested

04-01-2018

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿ ನಗರದಾದ್ಯಂತ ಗಾಂಜಾ ಮಾರಾಟ, ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, 9 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದೂವರೆ ಕೆ.ಜಿ. ಗಾಂಜಾ ಹಾಗೂ ಗಾಂಜಾ ತುಂಬಲು ಬಳಸುತ್ತಿದ್ದ 50 ಪಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಚನ್ನಗಿರಿಯ ಅಬ್ದುಲ್ ಖಾದರ್, ಭದ್ರಾವತಿಯ ಸುರೇಶ ಬಂಧಿತ ಅಂತರಜಿಲ್ಲಾ ಗಾಂಜಾ ಮಾರಾಟಗಾರರಾಗಿದ್ದು, ಮತ್ತೊಬ್ಬ ಆರೋಪಿ ಹಾಲೇಶ್ ತಲೆ ಮರೆಸಿಕೊಂಡಿದ್ದಾನೆ. ಅದಲ್ಲದೇ ಭದ್ರಾವತಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ, ಮಂಜ, ರಿಯಾಜ್, ಹೈದರಾಲಿ, ಮಹಮ್ಮದ್ ಇರ್ಫಾನ್, ಫಿರ್ದೋಸ್, ಜಾವೇದ್, ಅಜ್ಜು ಎಂಬುವರನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಅಭಿನವ ಖರೆ ಹಾಗೂ ಹೆಚ್ಚುವರಿ ಎಸ್.ಪಿ ಮುತ್ತುರಾಜ್ ರವರ ಮಾರ್ಗದರ್ಶನದಲ್ಲಿ ಡಿಸಿಬಿ ಇನ್ಸ್ ಪೆಕ್ಟರ್ ಕೆ.ಕುಮಾರ್, ಭದ್ರಾವತಿ ನಗರ ವೃತ್ತ ನಿರೀಕ್ಷಕ ಚಂದ್ರಶೇಖರ್, ಹಳೆನಗರ ಪೊಲೀಸ್ ಠಾಣೆಯ ಪಿಎಸ್ಐ ಶಿವಪ್ರಸಾದ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಲ್ಲದೇ, ಗಾಂಜಾ ಖರೀದಿಸಿ ಸೇವಿಸುತ್ತಿದ್ದವರ ಮೇಲೂ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.


ಸಂಬಂಧಿತ ಟ್ಯಾಗ್ಗಳು

ganja inter state ಇನ್ಸ್ ಪೆಕ್ಟರ್ ಚನ್ನಗಿರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ