ಬೆಳಗಾವಿ: ಹಲವಡೆ ಬಂದ್ ಮತ್ತು ರ‍್ಯಾಲಿ

Belagavi: Dalith organisations called for bandh

05-01-2018

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭೀಮಾ-ಕೋರೆಗಾಂವ್ ವಿಜಯೋತ್ಸವ ವೇಳೆ ನಡೆದ ಹಿಂಸಾಚಾರ ಖಂಡಿಸಿ, ಬೆಳಗಾವಿಯ ಹಲವೆಡೆ ಇಂದು ಬಂದ್ ಆಚರಿಸಲಾಗುತ್ತಿದೆ. ದಲಿತ ಪರ ಸಂಘಟನೆಗಳು ಜಿಲ್ಲೆಯ ಹಲವೆಡೆ ಬಂದ್ ಗೆ ಕರೆ ನೀಡಿದ್ದು, ಬೆಳಗಾವಿಯ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ, ಸದಲಗಾ ಹಾಗೂ ರಾಯಬಾಗ ತಾಲ್ಲೂಕಿನ ಹಾರೂಗೇರಿ ಪಟ್ಟಣ ಆಗಿವೆ. ಇದರಿಂದ ವಾಹನ ಸಂಚಾರ ವಿರಳವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಇನ್ನು ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದು, ಬಂದ್ ಹಿನ್ನೆಲೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 2 ಕೆಎಸ್ಆರ್ಪಿ ತುಕಡಿ, 6 ಪಿಎಸ್ಐಗಳನ್ನು ಒಳಗೊಂಡಂತೆ, ನೂರಾರು ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Koregaon Bhima Bandh ಬಂದೋಬಸ್ತ್ ವಿಜಯೋತ್ಸವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ