‘ಯಾವುದೇ ಸಂಘಟನೆಗಳನ್ನು ನಿಷೇಧಿಸುವುದಿಲ್ಲ’05-01-2018

ಬಾಗಲಕೋಟೆ: ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ಸದ್ಯ ಬ್ಯಾನ್ ಮಾಡೋದಿಲ್ಲ, ಈ ಕುರಿತು ಸಿಎಂ ಪ್ರವಾಸದಿಂದ ಮರಳಿದ ಮೇಲೆ ಚರ್ಚಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯ ಮಾಡುತ್ತಿದೆ. ಆದರೆ ಪಿಎಫ್ಐ ಸದಸ್ಯರು ಗ್ರಾಮಪಂಚಾಯತಿ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಟಿಪ್ಪು ಸುಲ್ತಾನ್ ದಿನಾಚರಣೆ ವಿಷಯದಲ್ಲೂ ಹೀಗೆ ವಿವಾದ ಎಬ್ಬಿಸಿದ್ದರು. ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಾರಿಯೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ, ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ ಎಂದಿದ್ದು, ಬಿಜೆಪಿಯವರು ಅಧಿಕಾರಕ್ಕೆ ಬರುತ್ತೇವೆಂದು ಹಗಲುಗನಸು ಕಾಣುತ್ತಿದ್ದಾರೆ‌, ಬಿಜೆಪಿ ಸರಕಾರವಿದ್ದಾಗ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು, ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿವೆ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramalinga reddy PFI ಅಪರಾಧ ಗ್ರಾಮಪಂಚಾಯತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ