ರಾಹುಲ್ ರಾಜ್ಯ ಪ್ರವಾಸಕ್ಕೆ ಮುಹೂರ್ತ ಫಿಕ್ಸ್

Rahul gandhi visits to karnataka this month

05-01-2018

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸಕ್ಕೆ ಮೂಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ 3 ದಿನ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ, ಇದೇ ತಿಂಗಳ 27ರಂದು ನಗರಕ್ಕೆ ಆಗಮಿಸಲಿದ್ದು, ಬಳ್ಳಾರಿಯ ಹೊಸಪೇಟೆಯಲ್ಲಿ ಕಾಂಗ್ರೆಸ್ ವತಿಯಿಂದ ನಡಯಲಿರುವ ಎಸ್ಟಿ ಸಮುದಾಯ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಜನವರಿ 28ರಂದು ಬೆಳಿಗ್ಗೆ ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ, ಮಧ್ಯಾಹ್ನ ಮೈಸೂರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಜನವರಿ 29ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಸಮಾವೇಶದಲ್ಲಿ ಭಾಷಣ ಮೂಲಕ ರಾಜ್ಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಗಳ ಸಿದ್ಧತೆ ಪರಿಶೀಲಿಸಲು ಜನವರಿ 8ರಂದು ಎಐಸಿಸಿ ಮಾಧ್ಯಮ ತಂಡ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಪದಾಧಿಕಾರಿಗಳೊಂದಿಗೆ 3 ದಿನ ಚರ್ಚೆ ನಡೆಸಲಿದೆ.


ಸಂಬಂಧಿತ ಟ್ಯಾಗ್ಗಳು

Rahul Gandhi AICC ಮಾಧ್ಯಮ ತಂಡ ಕೆಪಿಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ