ಶಿಮೊಗ್ಗದಲ್ಲಿಂದು ಸಿಎಂ ವಾಸ್ತವ್ಯ

sadhana samavesha in shimoga

06-01-2018

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿಂದು ಸಿಎಂ ಸಿದ್ದರಾಮಯ್ಯನವರು ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 882 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಚಿಕ್ಕಮಗಳೂರಿನಿಂದ ಸಾಗರ ಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಸ್ವಾಗತಕ್ಕೆ ಮಲೆನಾಡಿಗರು ಸಜ್ಜಾಗಿದ್ದಾರೆ. ಸಿದ್ದರಾಮಯ್ಯ ಅವರೊಂದಿಗೆ  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ, ಮಾಜಿ ಸಚಿವರು ಹಾಲಿ ಶಾಸಕರಾದ ಕಿಮ್ಮನೆ ರತ್ನಾಕರ್, ಎಂಎಲ್ಸಿ ಆರ್. ಪ್ರಸನ್ನ ಕುಮಾರ್, ಶಾಸಕ  ಕೆ.ಬಿ.ಪ್ರಸನ್ನ ಕುಮಾರ್ ಜೊತೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಅದಲ್ಲದೇ ಇಂದು ರಾತ್ರಿ ಸಿಎಂ ಶಿವಮೊಗ್ಗದಲ್ಲೇ ವಾಸ್ತವ್ಯ ಹೂಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah programes ವಾಸ್ತವ್ಯ ಕಂದಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ