‘ಕರ್ನಾಟಕ ಬಂದ್ ಎಚ್ಚರಿಕೆ’-ವಾಟಾಳ್

Vatal Nagaraj protest against pm modi in mahadayi issue

06-01-2018

ರಾಮನಗರ: ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ, ರಾಮನಗರ ಐಜೂರು ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದ ಲೋಕಸಭಾ ಸದಸ್ಯರ ಬಾಯಿ ಬಿದ್ದುಹೋಗಿದೆ. ಕೇಂದ್ರದ ಮೇಲೆ ಒತ್ತಡ ತರುವಲ್ಲಿ ಯಾವೊಬ್ಬ ಸಂಸದರು ಮುಂದಾಗಿಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ಕೂಡಲೇ ಪ್ರಧಾನಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು, ಇಲ್ಲವಾದಲ್ಲಿ ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಜನವರಿ 10ರಂದು ಎಲ್ಲಾ ಕನ್ನಡಪರ ಸಂಘಟನೆಗಳು ಮತ್ತು ಮಹದಾಯಿ ಹೋರಾಟಗಾರರೊಂದಿಗೆ ಸಭೆ ನಡೆಸಿ ನಂತರ ತೀರ್ಮಾನ ಮಾಡಲಾಗುವುದು ಎಂದು, ವಾಟಾಳ್ ನಾಗರಾಜ್ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ