ಹೆದ್ದಾರಿ ಮಧ್ಯೆ ಶವವಿಟ್ಟು ಪ್ರತಿಭಟನೆ

pedestrians protest at highway road devanahalli

06-01-2018

ದೇವನಹಳ್ಳಿ: ವೇಗವಾಗಿ ಬಂದ ಕಾರು ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಆಕ್ರೋಶಗೊಂಡ ಸ್ಥಳೀಯರು ದೇವನಹಳ್ಳಿ-ದೊಡ್ಡಬಳ್ಳಾಪುರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಅಪಘಾತದಲ್ಲಿ ಬೈರದೇನಹಳ್ಳಿ ವಿದ್ಯಾರ್ಥಿನಿ ಅಕ್ಷಿತಾ (14) ಬೆಳಿಗ್ಗೆ 9ರ ವೇಳೆ ಬೀರಸಂದ್ರ ಗೇಟ್ ಬಳಿ ಹತ್ತಿರದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಹರಿದು ಮೃತಪಟ್ಟಿದ್ದು ಇದನ್ನು ನೋಡಿ ಆಕ್ರೋಶಗೊಂಡ ಸ್ಥಳೀಯರು ಮೃತದೇಹವನ್ನು ರಸ್ತೆಯಲ್ಲಿಟ್ಟು ಹೆದ್ದಾರಿ ತಡೆ ನಡೆಸಿ ಮೃತ ಬಾಲಕಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿ ತಿಳಿದು ಪ್ರತಿಭಟನಾ ಸ್ಥಳಕ್ಕೆ ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಭೇಟಿ ನೀಡಿ ಪ್ರತಿಭಟನಕಾರರನ್ನು ಸಮಾಧಾನ ಪಡಿಸಿ ಮನವಿ ಸ್ವೀಕರಿಸಿದರು. ಹೆದ್ದಾರಿ ಕಾಮಗಾರಿ ವಿಳಂಬದಿಂದ ಈ ಪ್ರದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಆಕ್ರೋಶಗೊಂಡ ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರು ಚಾಲಕನನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಡಿವೈಎಸ್‍ಪಿ ನೇತೃತ್ವದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Accident Airport Road ಹೆದ್ದಾರಿ ಪ್ರಾಧಿಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ