ದಲಿತ ಯುವಕ ಸಾವು: ಚಿಕ್ಕೋಡಿ ಬಂದ್

chikkodi bandh today

08-01-2018

ಬೆಳಗಾವಿ: ಮಹಾರಾಷ್ಟ್ರದಲ್ಲಿ ನಡೆದ ಭೀಮಾ ಕೋರೆಗಾಂವ್ ಗಲಭೆಯಲ್ಲಿ ದಲಿತ ಯುವಕನೊಬ್ಬ ಸಾವು ಹಿನ್ನೆಲೆ, ಸಾವನ್ನು ಖಂಡಿಸಿ, ಬೆಳಗಾವಿಯ ಚಿಕ್ಕೋಡಿ ಬಂದ್ ಗೆ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿವೆ. ಬಂದ್ ನಿಮಿತ್ತ ಚಿಕ್ಕೋಡಿ ಸ್ಥಳೀಯ ಮತ್ತು ಹೊರರಾಜ್ಯಗಳಿಗೆ ಹೋಗುವ ಎಲ್ಲಾ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪಟ್ಟಣದ ಅಂಕಲಿಕೂಟ ಮತ್ತು ಹಲವಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಇಂದು ಚಿಕ್ಕೋಡಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕೋಡಿಯ ಪಟ್ಟಣದ ಬಹುತೇಕ ಪೆಟ್ರೋಲ್ ಬಂಕ್ಗಳು ಸೇರಿದಂತೆ ಎಟಿಎಂಗಳೂ ಸಹ ಬಂದ್ ಆಗಿವೆ. ಕೆ.ಎಸ್.ಆರ್.ಟಿ.ಸಿ ಬಸ್ಗಳಿಲ್ಲದೇ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದು, ಎಂಟೆಕ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಪಟ್ಟಣದ ನಾಲ್ಕೂ ದಿಕ್ಕಿನಲ್ಲಿ ಬ್ಯಾರಿಕೇಟ್ ಹಾಕಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bhima Koregaon Bandh ವಿದ್ಯಾರ್ಥಿ ಬ್ಯಾರಿಕೇಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ