ಭೀಕರ ಅಪಘಾತ 5 ಮಂದಿ ಸಾವು

Highway horrific accident 5 died

08-01-2018

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿರುವ ದಾರಣ ಘಟನೆ ನಡೆದಿದೆ. ಚಿತ್ರದುರ್ಗದ ಹೊರವಲಯದಲ್ಲಿರುವ ಸಿಬಾರದಲ್ಲಿ ಈ ಅಪಘಾತ ನಡೆದಿದೆ. ಕಬ್ಬಿಣ ತುಂಬಿದ ಲಾರಿ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಇವರಿಬ್ಬರ ಸ್ಥಿತಿಯು ಚಿಂತಾಜನಕವಾಗಿದೆ. ಮೃತರನ್ನು ಬೆಳಗಾವಿ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident high way ಚಿತ್ರದುರ್ಗ ಗ್ರಾಮಾಂತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ