ದಲಿತ ಸಂಘಟನೆಗಳ ಭಾರೀ ಪ್ರತಿಭಟನೆ

Dalith organisations huge protest in gadg

08-01-2018

ಗದಗ: ದಲಿತರ ಮೇಲೆ ದೌರ್ಜನ್ಯ, ಅನ್ಯಾಯ ಖಂಡಿಸಿ ದಲಿತ ಪರ ಸಂಘಟನೆಗಳು ಗದಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಗದಗ ನಗರದ ಗಾಂಧಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ರಸ್ತೆ ತಡೆ ನಡೆಸಿ ಹಲಗಿ ಬಾರಿಸುವುದರ ಮೂಲಕ ಮತ್ತು ಲಬೋ ಲಬೋ ಎಂದು ಬಾಯಿ ಬಡೆದುಕೊಂಡು ಪ್ರತಿಭಟಿಸಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಪ್ರಧಾನಿ ಮೋದಿ ಕೂಡಲೇ ಸಚಿವ ಅನಂತಕುಮಾರ ಹೆಗಡೆಯನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ಅದಲ್ಲದೇ ವಿಜಯಪುರದ ದಲಿತ ಬಾಲಕಿ ದಾನಮ್ಮ ಸಾವಿಗೆ ನ್ಯಾಯ ಸಿಗಬೇಕು, ಗದಗ ಜಿಲ್ಲೆಯ ಶಿಂಗಟಾಲೂರು ಗ್ರಾಮದ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ. ಜಾತಿವಾದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Anant Kumar Hegde Dalith ಸಚಿವ ಸಂಪುಟ ರಾಜ್ಯಪಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ