'ಬಾಯಿಗೆ ಬಂದಂತೆ ಹೇಳಿಕೆ ನೀಡಬೇಡಿ’- ಬಿಎಸ್ ವೈ

HD kumaraswamy and yeddyurappa

08-01-2018

ದೀಪಕ್ ರಾವ್ ಕೊಲೆ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಬಿಜೆಪಿ ಮೇಲೆ ಆರೋಪ ಮಾಡಿರುವ ಹಿನ್ನೆಲೆ, ಈ ಕುರಿತಂತೆ ಕುಮಾರಸ್ವಾಮಿ ಆರೋಪಕ್ಕೆ ಜಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ, ಬೇಜವಾಬ್ದಾರಿ ಹೇಳಿಕೆಯನ್ನು ಕುಮಾರಸ್ವಾಮಿ ನಿಲ್ಲಿಸಬೇಕು, ಮಾಜಿ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರು, ಈ ರೀತಿ ಹೇಳಿಕೆ ನೀಡಿ ತನಿಖೆಯ ದಾರಿ ತಪ್ಪಿಸಬಾರದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಜೊತೆ ನಾವೆಂದು ಕೈಜೋಡಿಸಲ್ಲ, ನಾವು 150 ಸೀಟ್ ಗೆದ್ದು ಅಧಿಕಾರಕ್ಕೆ ಬರುತ್ತೇವೆ, ಕಾಂಗ್ರೆಸ್ ಈಗಾಗಲೇ ಸೋತು ಸುಣ್ಣವಾಗಿದೆ. ಕುಮಾರಸ್ವಾಮಿ ಬಾಯಿಗೆ ಬಂದಂತೆ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ