‘ಡಿಸಿ-ಪಂಚಾಯತಿ ಸಿಇಒ ಜನರ ಕ್ಷಮೆ ಕೇಳಲಿ’08-01-2018

ಶಿವಮೊಗ್ಗ: ಕಾಂಗ್ರೆಸ್ ಸಾಧನಾ ಸಮಾವೇಶ ಹಿನ್ನೆಲೆ, ಶಿಮೊಗ್ಗಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ, ಜಿಲ್ಲೆಗೆ ಯಾವುದೇ ಕೊಡಿಗೆ ನೀಡಿ ಹೋಗಿಲ್ಲ ಎಂದು, ಮಾಜಿ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಸಿಎಂ ಜಿಲ್ಲೆಯ ಜನರ ಸಮಸ್ಯೆ ಆಲಿಸದೇ ಹೋಗಿದ್ದಾರೆ. ಮರಳಿನ ಸಮಸ್ಯೆ ಹೇಳಲು ಹೋದವರನ್ನು ಪೊಲೀಸರು ಬಂಧಿಸುತ್ತಾರೆ ಎಂದು ದೂರಿದ ಅವರು, ಸಾಧನಾ ಸಮಾವೇಶದಲ್ಲಿ ವಿರೋಧ ಪಕ್ಷದವರನ್ನು ಟೀಕೆ ಮಾಡುವಾಗ ಸರ್ಕಾರಿ ಅಧಿಕಾರಿಗಳು ಅಲ್ಲಿ ಇರಬೇಕಾ.? ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಸಾಧನಾ ಸಮಾವೇಶದಲ್ಲಿ ಶಿಷ್ಠಚಾರದ ಉಲ್ಲಂಘನೆಯಾಗಿದೆ. ಇದರ ಬಗ್ಗೆ ಬಿಜೆಪಿ ಸಧ್ಯದಲ್ಲೇ ಪ್ರತಿಭಟನೆ ನಡೆಸಲಿದೆ ಎಂದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ, ಜಿಲ್ಲಾ‌ ಪಂಚಾಯತಿ ಸಿಇಒ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ