'ತಾಲ್ಲೂಕು ಘೋಷಣೆಗಾಗಿ ಸಿಎಂ ಮೇಲೆ ಒತ್ತಡ’09-01-2018

ಕೊಡಗು: ಮಡಿಕೇರಿಯಲ್ಲಿಂದು ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ. ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅದಲ್ಲದೇ ಸರಕಾರದ ಫಲಾನುಭವಿಗಳಿಗೆ ಸರಕಾರದ ಹಲವು ಯೋಜನೆಗಳ ಸವಲತ್ತುಗಳ ವಿತರಣೆ ಮಾಡಲಿದ್ದಾರೆ. ಇನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಾಧನ ಸಮಾವೇಶವನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆ ಆಗಮಿಸುತ್ತಿರುವ ಹಿನ್ನೆಲೆ, ಕಳೆದ 155 ದಿನಗಳಿಂದ ಕಾವೇರಿ ತಾಲ್ಲೂಕು ಮತ್ತು ಪೊನ್ನಂಪೇಟೆ ತಾಲ್ಲೂಕು ಘೋಷಣೆಗಾಗಿ ನಡೆಯುತ್ತಿರುವ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ನಿನ್ನೆ ಪೊನ್ನಂಪೇಟೆ ವ್ಯಾಪ್ತಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿತ್ತು.


ಸಂಬಂಧಿತ ಟ್ಯಾಗ್ಗಳು

siddaramaiah sadhana samavesha ಕೋರ್ಟ್ ಸಭಾಂಗಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ