ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ



09-01-2018 508

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ತೇಜಸ್ (16) ಮೃತ ವಿದ್ಯಾರ್ಥಿ.ಈತ ಪ್ರಥಮ ವರ್ಷ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆಯಷ್ಟೇ ತೇಜಸ್ ಪೋಷಕರು ಹಾಸ್ಟೆಲ್ ಗೆ ಬಂದು ಹೋಗಿದ್ದರು. ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್ ನಲ್ಲಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide Hostel ವಿದ್ಯಾರ್ಥಿ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ