ಸಿದ್ದು ಸರ್ಕಾರದಲ್ಲಿ ಹಣ ಖಾಲಿ?

No Money in Siddhu government..?

09-01-2018

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಧಿಕಾರಾವಧಿ ಮುಕ್ತಾಯವಾಗುತ್ತಾ ಬರುತ್ತಿರುವಂತೆ, ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಹದಗೆಡುತ್ತಿರುವಂತೆ ಕಾಣುತ್ತಿದೆ. ಸಿಎಂ ಸಿದ್ದರಾಮಯ್ಯನವರು ಹೋದಲ್ಲಿ ಬಂದಲ್ಲಿ ಶಂಕು ಸ್ಥಾಪನೆಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ಸಾಧನೆ ಬಿಂಬಿಸುವ ನೆಪದಲ್ಲಿ, ಕಾಂಗ್ರೆಸ್ ಪಕ್ಷ ಮತ್ತು ವೈಯಕ್ತಿಕ ವರ್ಚಸ್ಸನ್ನೂ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯನವರು ದುಂದುವೆಚ್ಚ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಭರವಸೆ ನೀಡಿದ್ದರೂ ಕೂಡ, ಸರ್ಕಾರದ ಬಳಿ ಅದಕ್ಕೆ ಹಣವೇ ಇಲ್ಲ. ಸಿದ್ದರಾಮಯ್ಯ ಸರ್ಕಾರ, ಜಾರಿಗೆ ತಂದ ಹಲವಾರು ಅವೈಜ್ಞಾನಿಕ ಯೋಜನೆಗಳಿಗೆ ಸಾಕಷ್ಟು ಹಣ ವೆಚ್ಚವಾಗುತ್ತಿದೆ. ಹಲವು ವೆಚ್ಚಗಳಿಗೆ ಸಂಬಂಧಿಸಿದಂತೆ, ಸರ್ಕಾರ ಬಿಡುಗಡೆ ಮಾಡಬೇಕಾದ ಬಿಲ್‌ ಗಳನ್ನು ಚುಕ್ತಾ ಮಾಡುವುದಕ್ಕೂ ಕೂಡ, ರಾಜ್ಯ ಸರ್ಕಾರದ ಬಳಿ ಹಣ ಇರುವಂತೆ ಕಾಣುತ್ತಿಲ್ಲ. ಹೀಗಿದ್ದರೂ ಕೂಡ, ಸಿದ್ದರಾಮಯ್ಯ ಸರ್ಕಾರ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವಲ್ಲಾ ಆಗ ನೋಡಿಕೊಳ್ಳೋಣ ಎಂಬ ಧೋರಣೆಯಲ್ಲಿರುವಂತೆ ತೋರುತ್ತಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ