ಆರ್.ಅಶೋಕ್ ವಿರುದ್ಧ ಎಫ್ಐಆರ್

FIR against R.ashok in ACB

09-01-2018

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಇದೀಗ ಭ್ರಷ್ಟಾಚಾರ ನಿಗ್ರಹದಳ ಎಫ್‍ಐಆರ್ ದಾಖಲಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಎಫ್‍ಐಆರ್ ದಾಖಲಿಸಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿಸಲು ಸರ್ಕಾರ ಎಸಿಬಿ ಬಳಸಿಕೊಳ್ಳುತ್ತಿದೆ ಎಂಬ ಆರೋಪದ ನಡಡುವೆಯೇ  ಬಗರ್ ಹುಕುಂ ಭೂ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಆರ್.ಅಶೋಕ್ ಸಾಗುವಳಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಇದರ ಹಿಂದೆ ಭ್ರಷ್ಟಾಚಾರ ಇದೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಈಗ ಆರ್ ಅಶೋಕ್ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆ.13(1)(ಅ), 13(1) (ಆ), 13(2) ಐಪಿಸಿ 420, 120(ಬಿ )ಅಡಿ ಪ್ರಕರಣ ದಾಖಲಿಸಿ ಎಫ್‍ಐಆರ್ ದಾಖಲಿಸಿದ್ದಾರೆ. ಅಶೋಕ್ ಜೊತೆ ತಹಶಿಲ್ದಾರ್ ರಾಮಚಂದ್ರಯ್ಯ, ಕಂದಾಯ ಅಧಿಕಾರಿ ಗವೀಗೌಡ, ಚೌಡೇಗೌಡ ವಿರುದ್ಧವೂ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಅಧಿಕಾರಿಗಳು ಆರ್.ಅಶೋಕ್ ಗೆ ನೋಟಿಸ್ ನೀಡುವ ಸಾಧ್ಯತೆ ಇದೆ.


ಸಂಬಂಧಿತ ಟ್ಯಾಗ್ಗಳು

R.ashok ACB ಎಫ್.ಐ.ಆರ್ ತಹಶೀಲ್ದಾರ್​


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ