‘ಮಹಾಮಸ್ತಕಾಭಿಷೇಕಕ್ಕೆ ಕೇಂದ್ರ ಹಣ ನೀಡುತ್ತಿಲ್ಲ’09-01-2018

ಹಾವೇರಿ: ಮಹಾಮಸ್ತಕಾಭಿಷೇಕಕ್ಕೆ ಅನುದಾನ ನೀಡಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು, ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲಮಾಣಿ ಆರೋಪಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, ಅನುದಾನ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರು ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರ 175 ಕೋಟಿ ಅನುದಾನ ನೀಡಿದೆ. ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ಅದ್ಧೂರಿಯಾಗಿ ಮಹಾಮಸ್ತಾಭಿಷೇಕ ನಡೆಸುತ್ತೆವೆ ಎಂದು ಹೇಳಿದ್ದಾರೆ. ಇದೊಂದು ಭಾವನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯ ಸರ್ಕಾರವೇ ಸಂಪೂರ್ಣ ಖರ್ಚು ಭರಿಸಲು ಸಿದ್ಧವಿದೆ, ಮಹಾಮಸ್ತಕಾಭಿಷೇಕವನ್ನು ಅದ್ದೂರಿಯಾಗಿ ಮಾಡುತ್ತೇವೆ ಎಂದ ಅವರು ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ