‘ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಕನಸು’10-01-2018

ಚಿತ್ರದುರ್ಗ: ಖಾಲಿ ಚೀಲ ಕೊಟ್ಟು ನಮ್ಮದು ಅನ್ನಭಾಗ್ಯ ಅಂಥ ಹೇಳುವ ಸರ್ಕಾರ ಸಿದ್ದರಾಮಯ್ಯ ನವರ ಸರ್ಕಾರ ಎಂದು, ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಭ್ರಷ್ಟಾಚಾರದಲ್ಲಿ ಈ ಸರ್ಕಾರಕ್ಕೆ ಮಿತಿಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು 500 ಕೋಟಿ ಲ್ಯಾಪ್ ಟಾಪ್ ವಿತರಣೆಗೆ ನೀಡಿದ್ದಾರೆ, ಅದರಲ್ಲಿಯೂ ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ್ದಾರೆ. ಹೊಸ ಬೆಡ್ಡು, ದಿಂಬಿನ ಮೇಲೆ ಸಮಾಜ ಕಲ್ಯಾಣ ಸಚಿವರು ಹಳ್ಳಿ ವಾಸ್ತವ್ಯ ಮಾಡ್ತಾರೆ ಎಂದು ವ್ಯಂಗ್ಯವಾಡಿದ ಅವರು, ದಲಿತರು ಯಾವ ಕಾರಣಕ್ಕೂ ಕಾಂಗ್ರೆಸ್‌ಗೆ ಮತ ನೀಡಬೇಡಿ, ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಬೇಕೆಂಬುದು ನಮ್ಮ ಕನಸು ಎಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ