ಕಲ್ಲಿನಿಂದ ಜಜ್ಜಿ ಪತ್ನಿ ಕೊಲೆ

wife Murdered by his husband

10-01-2018 444

ಬೆಂಗಳೂರು: ಮನೆಯಲ್ಲಿ ಅಡುಗೆ ಮಾಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಹಂಡತಿಯನ್ನು ಕೊಲೆ ಮಾಡಿರುವ ಪಾಪಿ ಪತಿ ಪೊಲೀಸರ ಅಥಿತಿಯಾಗಿದ್ದಾನೆ. ಘಟನೆಯು ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲ್ಲೂಕಿನ ಸೂಲಕುಂಟೆ ನಿವಾಸಿಯಾದ ಲಕ್ಷ್ಮೀ ನರಸಮ್ಮ(40) ಮೃತ ದುರ್ದೈವಿ. ಕುಡಿತದ ಚಟವಿದ್ದ ನರಸಮ್ಮನ ಪತಿ ವೆಂಕಟೇಶ್ ಎಂದಿನಂತೆ ನಿನ್ನೆ ರಾತ್ರಿ ಕೂಡ ಕುಡಿದು ಮನೆಗೆ ಬಂದಿದ್ದಾನೆ. ಈ ವೇಳೆ ತಿನ್ನಲು ಊಟ ಹಾಕಿಕೊಡು ಎಂದು ಕೇಳಿದ್ದಾನೆ. ಇದಕ್ಕೆ ಪತ್ನಿ ನರಸಮ್ಮ ಅಡುಗೆ ಮಾಡಿಲ್ಲ ಎಂದು ಉತ್ತರಿಸಿದ್ದಾಳೆ. ಇದರಿಂದ ಕೊಪಗೊಂಡ ವೆಂಕಟೇಶ್ ಕುಡಿದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ, ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪತಿ ವೆಂಕಟೇಶ್ ನನ್ನು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. 


ಸಂಬಂಧಿತ ಟ್ಯಾಗ್ಗಳು

Mureder Nelamangala ಮಾರಣಾಂತಿಕ ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ