'ಭ್ರಷ್ಟಾಚಾರದಲ್ಲಿ ಸಚಿವ ಆಂಜನೇಯ ನಂಬರ್ 1'10-01-2018

ಚಿತ್ರದುರ್ಗ: ಸಮಾಜ ಕಲ್ಯಾಣ ಸಚಿವ ಆಂಜನೇಯ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದು, ಬಿಜೆಪಿ ಸಂಸದ ಬಿ.ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರಿಗೆ ಪರಿವರ್ತನಾ ಯತ್ರೆಯ ಜನರನ್ನ ನೋಡಿ ನಿದ್ದೆ ಬರುವುದಿಲ್ಲ ಎಂದರು. ಹಿಂದುಳಿದ ವರ್ಗದ ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಯಥಾ ರಾಜ ತಥಾ ಪ್ರಜಾ ಅನ್ನೋ ಹಾಗೇ ಆಗಿದೆ ಸಿದ್ದರಾಮಯ್ಯ-ಆಂಜನೇಯ ಅವರ ಕಥೆ ಎಂದು ವ್ಯಂಗ್ಯವಾಡಿದರು. ಸೂರ್ಯ ಚಂದ್ರ ಎಷ್ಟು ಸತ್ಯನೋ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

B. Sriramulu parivarthana yatra ಚುನಾವಣೆ ಅಧಿಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ