ಕುಖ್ಯಾತ ರೌಡಿಗೆ ಗುಂಡೇಟು

Gunfire on rowdy: kalaburagi

10-01-2018

ಕಲಬುರ್ಗಿ: ಕುಖ್ಯಾತ ರೌಡಿ ಮಲ್ಲಿಕಾರ್ಜುನ್ ಕಡಬೂರು ಅಲಿಯಾಸ್ ಮಲ್ಯಾ ಕಡಬೂರು ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ್ ಕಾಲಿಗೆ ಮತ್ತು ಕೈಗೆ ಗುಂಡು ತಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಘಟನೆಯು ಕಲಬುರ್ಗಿಯ ಕೆಸರಟಗಿ ಬಳಿ ನಡೆದಿದೆ. ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರು ಕುಖ್ಯಾತ ರೌಡಿ ಮಲ್ಲಿಕಾರ್ಜುನ್ ಕಡಬೂರು ಮೇಲೆ ಕಲಬುರಗಿ ಪೊಲೀಸರು ಕಣ್ಣಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಮಲ್ಲಿಕಾರ್ಜುನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ದಾಳಿಗೆ ಮುಂದಗಿದ್ದು, ಆತ್ಮರಕ್ಷಣೆಗಾಗಿ ಎರಡು ಸುತ್ತಿನ ಗುಂಡು ಹಾರಿಸಿದ್ದಾರೆ ಇದರಿಂದ ರೌಡಿ ಮಲ್ಲಿಕಾರ್ಜುನನ ಕಾಲಿಗೆ ಗುಂಡು ತಾಗಿ ಕೆಳಗಿಬಿದ್ದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇದಾಗುವ ಹೊತ್ತಿಗಾಗಲೆ ಓರ್ವ ಪೊಲೀಸ್ ಪೇದೆಯೊಬ್ಬರ ತಲೆ ಮೇಲೆ ಬೀರ್ ಬಾಟಲ್ ನಿಂದ ಹಲ್ಲೆ ಮಾಡಿದ್ದ. ಇನ್ನು ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಾರ್ಜುನನ್ನು ಜಿಲ್ಲಾ ಅಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

shoot out police ಕುಖ್ಯಾತ ರೌಡಿ ಬಾಟಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ