ಒಂದೇ ಗಂಟೆಯಲ್ಲಿ ಸರಗಳ್ಳ ಅರೆಸ್ಟ್

police arrested chain snatcher in one hour

10-01-2018

ಬೆಂಗಳೂರು: ಮಹಿಳೆಯೊಬ್ಬರ ಚಿನ್ನದಸರವನ್ನು ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಕೇವಲ 1 ಗಂಟೆ ಅವಧಿಯಲ್ಲಿ ಕೊಡಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಿಕ್ಕಟೇಕಲವಟ್ಟಿ ಮೂಲದ ದೇವಿ ನಗರದ ದೇವರಾಜ (32) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 20ಗ್ರಾಂ. ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಆರೋಪಿಯು ನಗರದ ಕಣ್ಣೂರಮ್ಮ ಲೇಔಟ್‍ನಲ್ಲಿ ಮನೆಗೆ ನಡೆದು ಹೋಗುತ್ತಿದ್ದ ಜಯಶ್ರೀ ಅವರ ಕತ್ತಿನಲ್ಲಿದ್ದ 20ಗ್ರಾಂ. ಸರವನ್ನು ಕಸಿದು ಪರಾರಿಯಾಗಿದ್ದ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಕೊಡಿಗೆಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೇವಲ 1 ಗಂಟೆಯಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

chain snach arrest ಡಿಸಿಪಿ ಚಿನ್ನದಸರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ