'ಶಾಂತಿ ಕದಡುವವರು ಭಯೋತ್ಪಾದಕರಲ್ಲವೇ’10-01-2018

ಬೆಂಗಳೂರು: ನಿಜವಾದ ಜೆಹಾದಿಗಳಾಗಿರುವ ಆರೆಸ್ಸೆಸ್ ಹಾಗೂ ಭಜರಂಗದಳವನ್ನು ಮೊದಲು ನಿಷೇಧಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಮೌರ್ಯ ಸರ್ಕಲ್ ನಲ್ಲಿ ಮೂಡುಗೆರೆಯ ಧನ್ಯಶ್ರೀ ಮೇಲೆ ನಡೆದ ಲೈಂಗಿಕ ದೌರ್ಜನ್ಯ ವಿರೋಧಿಸಿ ಎನ್‍.ಎಸ್.ಯು.ಐ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಶಾಂತಿ ಕದಡುತ್ತಿರುವ ಶೋಭಾ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ಭಯೋತ್ಪಾದಕರಲ್ಲವೇ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಹಿಂದು ಸಂಘಟನೆ ಹೆಸರಿನಲ್ಲಿ ಸಮಾಜದ ಶಾಂತಿ ಕದಡುವವರು ಭಯೋತ್ಪಾದಕರಲ್ಲದೆ ಬೇರೇನು ಎಂದು ಪ್ರಶ್ನಿಸಿದರು. ದೀಪಕ್ ರಾವ್, ಪ್ರವೀಣ್ ಪೂಜಾರಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು, ಲೈಂಗಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಧನ್ಯಶ್ರೀ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಧನ್ಯಶ್ರೀ ಹಿಂದೂ ಅಲ್ಲವೇ ? ಎಂದು ಪ್ರಶ್ನಿಸಿದರು.

ಧನ್ಯಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಭಜರಂಗದಳದ ಮುಖಂಡನ ಹೆಸರು ಕೇಳಿಬರುತ್ತಿರುವುದರಿಂದ ಬಿಜೆಪಿಯವರು ಮಾತನಾಡುತ್ತಿಲ್ಲ. ಶೋಭಾ ಕರಂದ್ಲಾಜೆ, ಯಾವ ಸಿದ್ಧಾಂತದಲ್ಲಿದ್ದಾರೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು. ಹಿಂದು ಸಂಘಟನೆ ಹೆಸರಿನಲ್ಲಿ ಸಮಾಜದ ಶಾಂತಿ ಕದಡುವವರು ಭಯೋತ್ಪಾದಕರಲ್ಲದೆ ಬೇರೇನು ಎಂದು ಗುಡುಗಿದರು.


ಸಂಬಂಧಿತ ಟ್ಯಾಗ್ಗಳು

Dinesh Gundu Rao KPCC ಆತ್ಮಹತ್ಯೆ ಭಜರಂಗದಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ