ರಾಯಬಾಗ-ಸಂಕೇಶ್ವರ ಪಟ್ಟಣ ಬಂದ್

Rayabhag -Sankeshwar town bandh

11-01-2018

ಬೆಳಗಾವಿ: ಭೀಮಾ ಕೋರೆಗಾಂವ್ ಗಲಭೆ ಹಾಗು ವಿಜಯಪುರದ ದಾನಮ್ಮ ಅತ್ಯಾಚಾರ-ಕೊಲೆ ಖಂಡಿಸಿ, ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣ ಹಾಗೂ ರಾಯಬಾಗ ಪಟ್ಟಣ ಬಂದ್ಗೆ ವಿವಿಧ ದಲಿತ ಪರ ಸಂಘಟನೆಗಳು ಕರೆ ನೀಡಿದ್ದು, ಎರಡೂ ಪಟ್ಟಣಗಳು ಸ್ತಬ್ಧವಾಗಿವೆ. ಪಟ್ಟಣದಲ್ಲಿ ವಾಹನ ಸಂಚಾರವಿಲ್ಲದೇ ಬಸ್ ನಿಲ್ದಾಣಗಳು, ರಸ್ತೆಗಳು ಬಿಕೋ ಎನ್ನುತ್ತಿವೆ. ಅಲ್ಲದೆ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲಿಸಿದ್ದಾರೆ. ಇನ್ನು ದಲಿತ ಪರ ಸಂಘಟನೆಗಳು ಎರಡೂ ಪಟ್ಟಣಗಳ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದು, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಲಿದ್ದಾರೆ. ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bandh Koregaon Bhima ದಲಿತ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ