‘ಶೋಭಾ ಕರಂದ್ಲಾಜೆಗೆ ಮಾಡಲು ಕೆಲಸವಿಲ್ಲ’11-01-2018

ವಿಜಯಪುರ: ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ಬಿಜೆಪಿಯವರೇ ಅಪರಾಧ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಾರೆ, ಬಿಜೆಪಿ ಕ್ರಿಮಿನಲ್ ರಾಜಕೀಯದಿಂದ ಹೊರ ಬರಲಿ, ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಮತ್ತು ಅಪರಾಧ ಪ್ರಕರಣಗಳಲ್ಲಿ ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಆರ್.ಎಸ್.ಎಸ್ ಇದೆ ಎಂದು ಆರೋಪಿಸಿದ್ದಾರೆ.

ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಜೆಪಿ ಮತ್ತು ಆರ್.ಎಸ್.ಎಸ್ ಪ್ರಯತ್ನಿಸುತ್ತಿವೆ, ಆದರೆ, ಕರ್ನಾಟಕದ ಜನತೆ ಜಾಣರಿದ್ದು, ಬಿಜೆಪಿ ಮತ್ತು ಆರ್.ಎಸ್.ಎಸ್. ಕೋಮು ವಿಭಜನೆಯ ತಂತ್ರವನ್ನು ಬಲ್ಲವರಾಗಿದ್ದಾರೆ, ಚುನಾವಣೆಯಲ್ಲಿ ಕನ್ನಡಿಗರು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು. ಆರ್.ಎಸ್.ಎಸ್ ಅಷ್ಟೇ ಅಲ್ಲ, ಹಿಂದೂ ಮೂಲಭೂತವಾದಿಗಳಾಗಲಿ ಬೇರೆ ಯಾರೇ ಕೋಮವಾದಿಗಳಾಗಿರಲಿ ಅವರ ವಿರುದ್ಧ ಸರಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಆರ್.ಎಸ್.ಎಸ್. ಕೋಮುವಾದಿ ಸಂಘಟನೆ ಎಂಬುದರಲ್ಲಿ ಎರಡು ಮಾತಿಲ್ಲ, ಈ ಸಂಘಟನೆಯನ್ನು ನಿಷೇಧ ಮಾಡುವದು ರಾಜ್ಯ ಸರಕಾರಕ್ಕೆ ಬಿಟ್ಟಿದ್ದು ಎಂದರು.  

ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತವಿಲ್ಲ, ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅದಲ್ಲದೇ ವಿಜಯಪುರ ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಒಡಕಿಲ್ಲ, ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತೇವೆ. ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲಾ ಆಕಾಂಕ್ಷಿಗಳು ಬದ್ಧರಾಗಿರುತ್ತಾರೆ ಎಂದರು. 

ಇನ್ನೂ ಎಲ್ಲಿ ಸಿಎಂ ಸಿದ್ದರಾಮಯ್ಯ ಹೋಗ್ತಾರೋ ಅಲ್ಲಿ ಹೆಣ ಬಿಳುತ್ತದೆ ಅನ್ನೋ ಶೋಭಾ ಕರಂದ್ಲಾಜೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ಶೋಭಾ ಕರಂದ್ಲಾಜೆಗೆ ಮಾಡಲು ಕೆಲಸವಿಲ್ಲ ಎಂದು ವ್ಯಂಗ್ಯವಾಡಿದರು.


ಸಂಬಂಧಿತ ಟ್ಯಾಗ್ಗಳು

K.C.Venugopal KPCC ಆರ್.ಎಸ್.ಎಸ್ ಹೈಕಮಾಂಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ