ಹಾಸನ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ

Ex district congress president resign to congress

11-01-2018

ಹಾಸನ: ಹಾಸನ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಬಿ.ಕೆ.ಚಂದ್ರಕಲಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಗಾಳಿಗೆ ತೂರಿ ವಲಸಿಗರಿಗೆ ಮಣೆಹಾಕುತ್ತಿದ್ದಾರೆ ಎಂದವರು ಆರೋಪಿಸಿದ್ದಾರೆ. ಪಕ್ಷದಲ್ಲಿ  ಉಸಿರು ಗಟ್ಟಿಸುವ ವಾತಾವರಣವಿದೆ. ಪಕ್ಷದ ಇತ್ತೀಚಿನ ವಿದ್ಯಮಾನಗಳಿಂದ ಮನಸ್ಸಿಗೆ ನೋವಾಗಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ 35 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ದುಡಿದರೂ ಕಡೇ ಪಕ್ಷ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲೂ ಸ್ಥಾನ ಸಿಕ್ಕಿಲ್ಲ ಎಂದು ಬೇಸರಗೊಂಡಿದ್ದಾರೆ. ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಚಂದ್ರಕಲಾ ಅವರು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Congress Kpcc ಪರಮೇಶ್ವರ್ ರಾಜೀನಾಮೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ