ಮಹಿಳೆಗೆ ಬೆದರಿಸಿ ಅತ್ಯಾಚಾರ: ಆರೋಪಿ ಬಂಧನ

rape and blackmail accuse arrested

11-01-2018

ಬೆಂಗಳೂರು: ಒಂಟಿಯಾಗಿದ್ದ ಮಹಿಳೆಯ ಮನೆಗೆ ನುಗ್ಗಿ ಬೆದರಿಸಿ ನಗ್ನ ವಿಡಿಯೋ ಮಾಡಿ ಆಕೆಗೆ ಅದನ್ನು ತೋರಿಸಿ ಸಾಮಾಜಿಕ ತಾಣಗಳಲ್ಲಿ ಹಾಕುವುದಾಗಿ ಬ್ಲಾಕ್‍ಮೇಲ್ ಮಾಡುತ್ತಾ ಆಕೆಯ ಮೇಲೆ ಯುವಕನೊಬ್ಬ ನಿರಂತರ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬಾಗಲಕುಂಟೆಯಲ್ಲಿ ಬೆಳಕಿಗೆ ಬಂದಿದೆ.

ಯುವಕ ಕಿರುಕುಳ ತಾಳಲಾರದೇ ಸಂತ್ರಸ್ತ ಮಹಿಳೆಯು ನೀಡಿದ ದೂರು ದಾಖಲಿಸಿ ತನಿಖೆ ಕೈಗೊಂಡ ಬಾಗಲಕುಂಟೆ ಪೊಲೀಸರು ಆರೋಪಿ ಸುನೀಲ್ ಕುಮಾರ್‍ನನ್ನು ಬಂಧಿಸಿದ್ದಾರೆ. ಈತ ಒಂದು ವರ್ಷದ ಹಿಂದೆ ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ದೃಶ್ಯಗಳನ್ನು ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡು ಬಳಿಕ ಆತ ಮಹಿಳೆಗೆ ಬ್ಲಾಕ್‍ಮೇಲ್ ಮಾಡುತ್ತಿದ್ದ.

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಮಹಿಳೆಯನ್ನು ಬೆದರಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ. ನಾನು  ಮದುವೆಯಾಗುವವರೆಗೂ ನೀನೇ ನನ್ನ ಹೆಂಡತಿ ಎಂದು ಆಕೆಯ ಬಳಿ ಆರೋಪಿ ಹೇಳಿಕೊಳ್ಳುತ್ತಿದ್ದ. ಅಲ್ಲದೆ ನೀನು ಇದನ್ನು ಒಪ್ಪಿಕೊಳ್ಳದಿದ್ದರೆ ನಿನ್ನ ಗಂಡನಿಗೆ ಅತ್ಯಾಚಾರದ ವಿಡಿಯೋ ಕಳಿಸುವುದಾಗಿ ಬೆದರಿಸುತ್ತಿದ್ದ.

ಆರೋಪಿಯ ವರ್ತನೆಯಿಂದ ಬೇಸತ್ತ ಮಹಿಳೆ ಕಳೆದ ತಿಂಗಳು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಈಗ ಆರೋಪಿ ಸುನೀಲ್ ಕುಮಾರ್‍ ನನ್ನು ಬಂಧಿಸಿದ್ದಾರೆ.  ಆರೋಪಿ ಸುನೀಲ್ ಕುಮಾರ್ ಇದೇ ರೀತಿ ಹಲವು ಮಹಿಳೆಯರನ್ನು ಬೆದರಿಸಿ ಅತ್ಯಾಚಾರ ಮಾಡಿರುವುದು ವಿಚಾರಣೆಯಲ್ಲಿ ಗೊತ್ತಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

Rape mobile video ಕಿರುಕುಳ ಬ್ಲಾಕ್‍ ಮೇಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ