ಅತ್ಯಾಚಾರ: ಮಹಿಳೆ ಆತ್ಮಹತ್ಯೆಗೆ ಯತ್ನ

Rape: Woman attempts suicide

12-01-2018

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಮೇಲೆ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಸಕ್ರಿಯ ಬಿಜೆಪಿ ಕಾರ್ಯಕರ್ತ, ನರೇಂದ್ರ ಹೆಗ್ಡೆ ಎಂಬುವರ ವಿರುದ್ಧ ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು, ಜನವರಿ 10ರಂದು ಮಹಿಳೆ ದೂರು ನೀಡಿದ್ದಳು. ಆದರೆ ದೂರು ನೀಡಿದ ಎರಡು ದಿನಗಳ ನಂತರ ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಇದೀಗ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Suicide ಶೃಂಗೇರಿ ಕಾರ್ಯಕರ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ