ಅನಂತಕುಮಾರ್ ಹೆಗಡೆ ವಿರುದ್ಧ ನಿಲ್ಲದ ಹೋರಾಟ

koppal

12-01-2018

ಕೊಪ್ಪಳ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಉತ್ತರ ಕರ್ನಾಟಕದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಇಂದು ಕೊಪ್ಪಳದ ಗಂಗಾವತಿ ಬಂದ್ಗೆ ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಗಂಗಾವತಿ ಸಂಪೂರ್ಣ ಸ್ತಬ್ಧವಾಗಿದೆ. ಅಂಗಡಿ ಮುಂಗಟ್ಟುಗಳನ್ನು ಸ್ಚಯಂ ಪ್ರೇರಿತವಾಗಿ ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ. ಇನ್ನು ಗಂಗಾವತಿಯಲ್ಲಿ ಸಂಚಾರ ಅತಿ ವಿರಳವಾಗಿದ್ದು, ಬಂದ್ ವಿಚಾರ ತಿಳಿಯದೆ ಗಂಗಾವತಿಗೆ ಬಂದಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.

ದಲಿತ ಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ವಿಜಯಪುರದ ದಾನಮ್ಮ ಅತ್ಯಾಚಾರ-ಕೊಲೆಗೆ ಭಾರೀ ಖಂಡನೆ ವ್ಯಕ್ತಪಡಿಸಿವೆ. ಅದಲ್ಲದೇ ಅನಂತಕುಮಾರ ಹೆಗಡೆ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆ, ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ‌ ನಡೆದ ಗಲಭೆ ಖಂಡಿಸಿ ದಲಿತರ ಮೇಲಿನ ದೌರ್ಜನ್ಯಗಳು ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ ಆದರೆ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಕೊಪ್ಪಳ ಎಸ್.ಪಿ ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ