ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ

Patrol bunk staff attacked

12-01-2018

ಬೆಂಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಕಾರಿಗೆ ಡೀಸಲ್ ತುಂಬಿಸಿಕೊಂಡು ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಬಾಗಲಗುಂಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್ 8ರಂದು ತಡರಾತ್ರಿ ಬಾಗಲಗುಂಟೆಯ ಗ್ಯಾಸ್ಟೋಲಿನ್ ಪಾರ್ಕ್ ಬಳಿ ಇರುವ ಪೆಟ್ರೋಲ್ ಬಂಕ್‍ಗೆ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮ್ಯಾನೇಜರ್ ತಿಮ್ಮರಾಜುಗೆ ಕಾಲಿನಿಂದ ಒದ್ದು, ಹಲ್ಲೆ ನಡೆಸಿದ್ದಾರೆ. ಪ್ರಶ್ನಿಸಲು ಬಂದ ಇತರ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿ, ಬೆದರಿಸಿ 2 ಸಾವಿರ ರೂ.ಗಳ ಡೀಸೆಲ್ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಕೆಎ04ಎಎ8844 ಕಾರಿನಲ್ಲಿ ಬಂದು ಕೃತ್ಯ ನಡೆಸಿರುವುದು ಬಂಕ್‍ನಲ್ಲಿದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಿಸಿರುವ ಬಾಗಲಗುಂಟೆ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

disel Petrol bunk ಹಲ್ಲೆ ದುಷ್ಕರ್ಮಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ