ಕಾಂಗ್ರೆಸ್ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ

BJP protests against Congress

12-01-2018

ಕಲಬುರಗಿ: ಬಿಜೆಪಿ ಮತ್ತು ಸಂಘ ಪರಿವಾರಗಳ ವಿರುದ್ಧ ಸಿಎಂ ಹೇಳಿಕೆ ಖಂಡಿಸಿ, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ ಮತ್ತು ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವೇಳೆ ನೂಕುನುಗ್ಗಲು ಉಂಟಾಗಿದ್ದು, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದವೂ ನಡೆಯಿತು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ವೇಳೆ ಬ್ಯಾರಿಕೇಡ್ ಮುರಿದ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ  ಬಿಜೆಪಿ ಪ್ರತಿಭಟನೆ ಹಮ್ಮಿಕಂಡಿದ್ದು, ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೆ, ಆಕ್ರೋಶಗೊಂಡ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇನ್ನು ಇದೇ ವಿಚಾರವಾಗಿ, ಪೊಲೀಸರು-ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ವಾಗ್ವಾದವೇ ಜರುಗಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರೇವುನಾಯಕ ಬೆಳಮಗಿ, ಶಾಸಕ ದತ್ತಾತ್ರೇಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಬೋಳಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಲಾಯಿತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ