ತುಮಕೂರಲ್ಲೂ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Protest against Congress in Tumkur

12-01-2018

ತುಮಕೂರು: ಆರ್.ಎಸ್.ಎಸ್ ಮತ್ತು ಸಂಘ ಪರಿವಾರಗಳ ಕರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ, ಹಲವೆಡೆ ಪ್ರತಿಭಟನೆಗಳನ್ನು ನಡೆಸಿದೆ. ತುಮಕೂರಿನಲ್ಲಿಯೂ ಮುಖ್ಯಮಂತ್ರಿ ಹೇಳಿಕೆಗೆ ಜಿಲ್ಲಾ ಬಿಜೆಪಿಯಿಂದ ಖಂಡನೆ ವ್ಯಕ್ತವಾಗಿದೆ. ಈ ಕುರಿತು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದ್ದಾರೆ. ಆದರೆ ಮುತ್ತಿಗೆಗೂ ಮುನ್ನವೇ ಬ್ಯಾರಿಕೆಡ್ ಹಾಕಿ ಪೊಲೀಸರು ತಡೆದಿದ್ದಾರೆ. ನಗರದ ಭದ್ರಮ್ಮ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪೊಲೀಸರು ತಡೆದಿದ್ದರಿಂದ ಕೇವಲ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.

ಇನ್ನು ಕೊಪ್ಪಳದಲ್ಲಿಯೂ ಬಿಜೆಪಿ ಪ್ರತಿಭಟನಾ ವೇಳೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ, ಸುಮಾರು 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಚೇರಿಗೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.


ಸಂಬಂಧಿತ ಟ್ಯಾಗ್ಗಳು

protest BJP ಕಾರ್ಯಕರ್ತ ಬ್ಯಾರಿಕೇಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ