ಬೆಂಗಳೂರಲ್ಲಿ ಇರಾನಿ ಗ್ಯಾಂಗ್…!

irani gang in bengaluru...!

15-01-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಕ್ಕೆ ಇರಾನಿ ಗ್ಯಾಂಗ್‌ ಕಾಲಿಟ್ಟಿದ್ದು, ಎರಡು ದಿನಗಳಿಂದ ರಾತ್ರಿ, ಹಗಲೆನ್ನದೆ ಸರಗಳ್ಳತನ ಪ್ರಕರಣಗಳು ನಡೆಯುತ್ತಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗುವಂತಾಗಿದೆ. ದೊಡ್ಡಬಳ್ಳಾಪುರದ ನಗರದಲ್ಲಿಯೇ ಹೆಚ್ಚು ಜನ ಒಡಾಡುವ ರಂಗಪ್ಪ ಸರ್ಕಲ್ ಬಳಿಯಿರುವ ಶಾರದಮ್ಮ ಎಂಬುವರು ವಹ್ನಿಗರ ಪೇಟೆಯ ಮೂಲಕ ನಡೆದುಕೊಂಡು ಬರುತ್ತಿರುವಾಗ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು, ಶಾರದಮ್ಮ ಅವರನ್ನು ನೂಕಿ ಅವರಿಂದ ಸುಮಾರು 70 ಗ್ರಾಂ. ತೂಕವಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಅದಲ್ಲದೇ ನಗರದ ಚೌಡೇಶ್ವರಿಗುಡಿ ಬೀದಿಯುಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಮಾದೇವಿ ಎಂಬುವವರ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ.ತೂಕದ ಚಿನ್ನದ ಮಾಂಗಲ್ಯ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಸಂಕ್ರಾಂತಿ ಹಬ್ಬಕ್ಕೆಂದು ಕುಚ್ಚಪ್ಪನಪೇಟೆಯಲ್ಲಿ ನಾಗರತ್ನಮ್ಮ ಅವರು ತಮ್ಮ ಮನೆಯ ಮುಂದೆ ರಂಗೋಲಿ  ಬಿಡುತ್ತಿದ್ದ ವೇಳೆ ಇಬ್ಬರು ಯುವಕರು ಬಂದು ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ. ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಮೂರು ಪ್ರಕರಣವನ್ನು ದಾಖಲಿಸಿಕೊಂಡಿರುವ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಸರಕಳವು ಮಾಡುವುಲ್ಲಿ ಸಕ್ರಿಯವಾಗಿರುವ ಇರಾನಿ ಗ್ಯಾಂಗ್‌ನ ಸಹಚರರು ನಗರಕ್ಕೆ ಕಾಲಿಟ್ಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒಂದೇ ವಾರದ ಅಂತರದಲ್ಲಿ ಮೂರು ಪ್ರಕರಣಗಳು ದಾಖಲಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.


ಸಂಬಂಧಿತ ಟ್ಯಾಗ್ಗಳು

irani gang chain snatch ತನಿಖೆ ಸರಕಳವು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ