ಕಿಡಿಗೇಡಿಗಳ ಕೃತ್ಯ:ಕಾರುಗಳಿಗೆ ಬೆಂಕಿ

At least 8 cars burnt in kalaburagi

15-01-2018

ಕಲಬುರಗಿ: ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಅನಂದ ನಗರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಬಡಾವಣೆಯ ಮನೆಗಳ ಮುಂದೆ ನಿಲ್ಲಿಸಿದ್ದ ಸುಮಾರು 10 ಕಾರುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಬಡಾವಣೆಯ ಆನಂದ್ ದೊಡ್ಡಮನಿ ಎಂಬುವರ ಐ20ಕಾರಿಗೆ ಬೆಂಕಿ ಹಚ್ಚಿದ್ದು ಕಾರು ಸಂಪೂರ್ಣ ಕರಕಲಾಗಿದೆ. ಅದಲ್ಲದೇ ಮತ್ತೊಂದು ಕಾರಿಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಸ್ಟೇಶನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಇದೇ ರೀತಿಯ ಕೃತ್ಯ ನಗರದಲ್ಲಿ ಜನರನ್ನು ಆತಂಕಕ್ಕೀಡುಮಾಡಿದ್ದು, ಇದೀಗ ಮತ್ತೋಮ್ಮ ಘಟನೆ ಮರುಕಳಿಸಿದೆ. ಈ ಮೂಲಕ ಕಲಬುರಗಿ ಪೊಲೀಸರ ನಿದ್ದೆಗೆಡಿಸಿದ್ದಾರೆ ದುಷ್ಕರ್ಮಿಗಳು. ಮಾನಸಿಕ ಅಸ್ವಸ್ಥ ನಿಂದ ಕೃತ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.


ಸಂಬಂಧಿತ ಟ್ಯಾಗ್ಗಳು

Fire Car ದುಷ್ಕರ್ಮಿ ಶಂಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ