‘ನೀರಿನ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತೇನೆ’

"HD Devegowda reaction on mahadayi issue

15-01-2018

ರಾಜ್ಯದಲ್ಲಿ ಮತ್ತೆ ಮಹದಾಯಿ ಹಾಗೂ ಕಾವೇರಿ ನದಿ ನೀರು ವಿವಾದಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪ್ರಧಾನಿಗಳೊಂದಿಗೆ ಮಹದಾಯಿ ವಿಚಾರದ ಬಗ್ಗೆ ಮಾತನಾಡಿದ್ದೇನೆ, ವಿವರಣೆ ಸಹ ನೀಡಿದ್ದೇನೆ ಆದರೆ ಯಾವ ಕಾರಣಕ್ಕೆ ಪ್ರಧಾನಿಗಳು ಹಿಂದೆ ಮುಂದೆ ನೋಡುತ್ತಿದ್ದಾರೆ ಅನ್ನೋದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ನಾನು ಉಪವಾಸ ಸತ್ಯಾಗ್ರಹ ಮಾಡಿದ್ದೆ, ಕಾವೇರಿ ಹೋರಾಟನೇ ಬೇರೆ, ಮಹದಾಯಿ ವಿಚಾರವೇ ಬೇರೆ. ಮಹದಾಯಿ ವಿಚಾರ ಇನ್ನೂ ಆ ಹಂತ ತಲುಪಿಲ್ಲ. ಆ ಹಂತ ತಲುಪಿದರೆ ಖಂಡಿತ ಉಗ್ರ ಹೋರಾಟ ಮಾಡುತ್ತೇನೆ. ಸಂಸತ್ ನಲ್ಲಿ ಒಂದು ಪ್ರಾದೇಶಿಕ ಪಕ್ಷವಾಗಿ ಧ್ವನಿ ಎತ್ತುತ್ತೇವೆ. ರಾಜ್ಯದಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತೇನೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Deve Gowda Mahadayi ಹೋರಾಟ ಸಮಸ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ