ಪಂಚಾಯತಿ ಸದಸ್ಯನ ಮೇಲೆ ಹಲ್ಲೆ

Panchayat member attacked by 6 members gang

16-01-2018

ಶಿವಮೊಗ್ಗ: ಗ್ರಾಮ ಪಂಚಾಯತಿ ಸದಸ್ಯ ಹಾಗು ಆತನ ಪತ್ನಿ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ಮಾಡಿರುವ ಘಟನೆಯು, ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ರಿಪ್ಪನ್ ಪೇಟೆಯ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಹಾಗು ಆತನ ಪತ್ನಿ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ನಿನ್ನೆ ತಮ್ಮನ ಮದುವೆ ಕಾರ್ಯುಮುಗಿಸಿಕೊಂಡು ವಾಪಸ್ಸು ಬರುವಾಗ ಆರು ಮಂದಿಯ ತಂಡ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ಆಸಿಫ್ ಹಾಗು ಆತನ ಪತ್ನಿಗೆ ತೀವ್ರ ಗಾಯಗಳಾಗಿದ್ದು, ತಲೆ ಮತ್ತು ಇತರೆಡೆ ಹಲ್ಲೆಗೊಳಿಸಿದ್ದಾರೆ. ಇನ್ನು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

gram pachayath Shimoga ಗಾಯಾಳು ಚಿಕಿತ್ಸೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ