ಹುಬ್ಬಳ್ಳಿಯಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ

International kite festival in hubli

16-01-2018

ಹುಬ್ಬಳ್ಳಿ: ಜನವರಿ 19ರಂದು ಹುಬ್ಬಳ್ಳಿಯಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದೆ ಎಂದು, ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪ್ರವಾಸೋದ್ಯಮ ಹಾಗೂ ವಾಣಿಜ್ಯೋದ್ಯಮ ಬೆಳವಣಿಗೆಗೆ ಸಹಕಾರಿಯಾಗಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದರು. ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜ್ ಕ್ಯಾಂಪಸ್ನಲ್ಲಿ ಗಾಳಿಪಟ ಉತ್ಸವ ಆಯೋಜಿಸಿದ್ದು, ಸಮತಾ ಸಂಸ್ಥೆ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಭಾಗಿಯಾಗಲಿವೆ ಎಂದರು. ಭಾರತ ಸೇರಿದಂತೆ, ಆಸ್ಟ್ರೇಲಿಯಾ, ಫ್ರಾನ್ಸ್, ಇಟಲಿ, ನ್ಯೂಜಿಲೆಂಡ್, ಯುಎಸ್ಎ, ಕೆನಡಾ ವಿಶ್ವದ 12 ದೇಶಗಳು ಗಾಳಿಪಟ ಉತ್ಸವದಲ್ಲಿ ಭಾಗಿಯಾಗಲಿವೆ ಎಂದು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ