ಕೌಶಲ್ಯ ಅಭಿವೃದ್ಧಿ ವಿವಿಗೆ ಚಿಂತನೆ..!16-01-2018

ಬೆಳಗಾವಿ: ಬೆಳಗಾವಿಯಲ್ಲಿ ಸ್ಕಿಲ್ಸ್ ಮತ್ತು ವಿಲ್ಸ್ ಇಂದಿನಿಂದ ಪ್ರಾರಂಭವಾಗಲಿದೆ ಎಂದು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಕೌಶಲ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದರು. ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ವಿವಿಯೂ ಸ್ಥಾಪನೆಗೊಳ್ಳಲಿದೆ, ದೇಶದ 7 ಕಡೆ ವಿವಿಯ ಸ್ಥಾಪನೆಗೆ ಚಿಂತನೆ ನಡೆದಿದೆ, ಕರ್ನಾಟಕದಲ್ಲಿ ಇದೀಗ ವಿವಿಯ ಸ್ಥಾಪನೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗುವುದೆಂದರು.

ವಿವಿಯಲ್ಲಿ ಎಲ್ಲಾ ರೀತಿಯ ಕೌಶಲ್ಯಗಳ ತರಬೇತಿ ನೀಡಲಾಗುವುದು. ಐಐಟಿ ಮಾದರಿಯಲ್ಲಿ ರಾಜ್ಯಕ್ಕೆ ಒಂದರಂತೆ, ಐಐಎಸ್ಸಿ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಜಗತ್ತಿನ ಹೊಸ ಹೊಸ ತಂತ್ರಜ್ಞಾನ ಪರಿಚಯ ದೃಷ್ಟಿಯಿಂದ ಐಐಎಸ್ಸಿ ಸ್ಥಾಪನೆಯಾಗುತ್ತಿದ್ದು, ಭವಿಷ್ಯದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದರು. ಅಲ್ಲದೇ ದೇಶದಲ್ಲಿ ಅನೇಕ ಕುಲಕಸುಬುಗಳು ಜೀವಂತ ಇವೆ, ಇಂತಹ ಉದ್ಯೋಗಳನ್ನು ಗುರುತಿಸಿ ತರಬೇತಿ ನೀಡುತ್ತೇವೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Anant Kumar Hegde skill development ಜೀವಂತ ಉದ್ಯೋಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ