ಮಂಡ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಹೊಗೆ...!

insurgency in mandya congress...!

16-01-2018

ಮಂಡ್ಯ: ಚುನಾವಣೆಗೂ ಮುನ್ನವೇ ಮಂಡ್ಯ ಕಾಂಗ್ರೆಸ್ನಲ್ಲಿ ಬಂಡಾಯದ ಹೊಗೆಯಾಡುತ್ತಿದೆ. .ಕಾಂಗ್ರೆಸ್ ಹೈಕಮಾಂಡ್ ಗೆ ಮೊದಲ ಬಂಡಾಯದ ಬಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಿಂದ ತಟ್ಟಲಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಪುಟ್ಟೇಗೌಡರು ಪಕ್ಷದ ಮೂಲ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ನೀಡದೆ ಹೋದರೆ ಬಂಡಾಯದ ಎಚ್ಚರಿಕೆ ನೀಡಿದ್ದಾರೆ. ಅಂಬರೀಶ್ ಸೋಲಿಸಿದ್ದೆ ನನ್ನ ಸಾಧನೆ ಎಂದು ಹೇಳೋ ಶಾಸಕ ರಮೇಶ್ ಬಾಬುಗೆ ಕಾಂಗ್ರೆಸ್ ಟಿಕೆಟ್ ನೀಡಲು ಪುಟ್ಟೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮೇಶ್ ಬಾಬು ಟಿಕೆಟ್ ನೀಡುವುದರ ಬಗ್ಗೆ ಬಹಿರಂಗವಾಗಿ ವಿರೋಧಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress high comand ಶ್ರೀರಂಗಪಟ್ಟಣ ವಿರೋಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ