ಹಿಟ್ ಅಂಡ್ ರನ್ ವ್ಯಕ್ತಿ ಬಲಿ

Hit and Run accident bike rider died

16-01-2018

ದೇವನಹಳ್ಳಿ: ಹಿಟ್ ಅಂಡ್ ರನ್ ಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆಯು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ ದೇವನಹಳ್ಳಿ ತಾಲ್ಲೂಕಿನ‌ ವಿಜಯಪುರ ಬಳಿ ನಡೆದಿದೆ. ವಿಜಯಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡ ಚೊಕ್ಕೊಂಡನಹಳ್ಳಿ ನಿವಾಸಿ ಪ್ರಕಾಶ್(42) ಮೃತ ದುರ್ದೈವಿ. ಬೈಕ್ ಗೆ ಡಿಕ್ಕಿ ಹೊಡೆದ ವಾಹನ ಯಾವುದೆಂದು ಪತ್ತೆಯಾಗದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡ ವಿಜಯಪುರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident highway ಹೆದ್ದಾರಿ ಬಲಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ