ಮತ್ತೆ ನಾಲಿಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ

Again controversial statement : Anant Kumar Hegde

17-01-2018

ಕಲಬುರಗಿ: ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ. ಜನರ ಕೆಲಸ ಮಾಡಲಾಗದ ರಾಜಕಾರಣಿ ಜನಪ್ರತಿ ನಿಧಿಗಳಾಗಲು ನಾಲಾಯಕ್ ಎಂದು ರಾಜಕಾರಣಿಗಳ ವಿರುದ್ದವೇ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ನಡೆದ ಚೆಂಬರ್ಸ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾರಣದ ಕುರ್ಚಿ ತಮಾಶೆಗಾಗಿಯಲ್ಲ, ಆ ಕುರ್ಚಿಯ ಮೇಲಿನ ಜವಾಬ್ದಾರಿ ಅತ್ಯಂತ ದೊಡ್ಡದು, ಜನರ ಕಲ್ಪನೆಗಳನ್ನು ಅರ್ಥ ಮಾಡಿಕೊಳ್ಳದ ರಾಜಕಾರಣಿಗೆ ಧಿಕ್ಕಾರ ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮ ಬೆಳವಣಿಗೆಯಾಗದೇ ಇರುವುದಕ್ಕೆ ಇಲ್ಲಿನ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎಂದು ಪರೋಕ್ಷವಾಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಲ್ಲಿನ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Anant Kumar Hegde BJP ಕೈಗಾರಿಕೋದ್ಯಮ ಸಂಸದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ