ಮಹಿಳೆ ಪ್ರಜ್ಞೆ ತಪ್ಪಿಸಿ ದರೋಡೆ

Fake monk and robbery

17-01-2018

ದೇವನಹಳ್ಳಿ: ಗೃಹಿಣಿಯ ಪ್ರಜ್ಞೆ ತಪ್ಪಿಸಿ ಹಾಡಹಗಲೇ ದರೋಡೆ ಮಾಡಿರುವ ಘಟನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸನ್ಯಾಸಿ ವೇಷದಲ್ಲಿ ಮನೆಗೆ ಬಂದಿದ್ದ ಅಪರಿಚಿತ ವ್ಯಕ್ತಿ ಗೃಹಿಣಿಯ ಹಣೆಗೆ ವಿಭೂತಿಯಿಟ್ಟು, ಪ್ರಜ್ಞೆ ತಪ್ಪಿಸಿ ದರೋಡೆ ಮಾಡಿದ್ದಾನೆ. ಪಟ್ಟಣದ ಶ್ರೀನಿವಾಸ್ ಎಂಬವರ ಮನೆಯಲ್ಲಿ ದರೋಡೆ ನಡೆದಿದೆ. ಮನೆಯಲ್ಲಿದ್ದ ಸಂಧ್ಯಾ ಎಂಬ ಮಹಿಳೆಯ ಪ್ರಜ್ಞೆ ತಪ್ಪಿಸಿ ಈ ಕೃತ್ಯ ಎಸಗಿದ್ದಾನೆ. ಮದ್ಯಾಹ್ನ ಶ್ರೀನಿವಾಸ್ ಎಂಬುವರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಪ್ರಜ್ಞೆಯಿಲ್ಲದೆ ಬಿದ್ದಿದ್ದ ಸಂಧ್ಯಾಳನ್ನ ಚಿಕಿತ್ಸೆಗಾಗಿ ಸ್ಥಳಿಯ ಆಸ್ವತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Robbery Devanahalli ವಿಭೂತಿ ಗೃಹಿಣಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ