ಹಿರಿಯ ನಟ-ನಿರ್ದೇಶಕ ಕಾಶಿನಾಥ್ ಇನ್ನಿಲ್ಲ...

18-01-2018
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಾಶಿನಾಥ್, ತೀವ್ರ ಅನಾರೋಗ್ಯ ಹಿನ್ನೆಲೆ, ಎರಡು ದಿನಗಳ ಹಿಂದಷ್ಟೇ ನಗರದ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆ ಮತ್ತು ನಿರ್ದೇಶನದಿಂದ ಕನ್ನಡ ಸಿನಿ ರಸಿಕರ ಮನ ಗೆದ್ದಿದ್ದರು. ಇತ್ತೀಚೆಗಷ್ಟೆ 'ಚೌಕ' ಸಿನೆಮಾದಲ್ಲಿ ವಿಭಿನ್ನ ಪಾತ್ರ ಮಾಡಿದ್ದರು. ಕಾಶಿನಾಧ್ ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ