ಜೆಡಿಎಸ್ ತೊರೆದ ಇಬ್ಬರು ಶಾಸಕರು

Dr .Shivraj patil  joining to BJP..!

18-01-2018

ಬೆಂಗಳೂರು: ಜೆಡಿಎಸ್ ನ ಇಬ್ಬರು ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ಹಾಗು ಲಿಂಗಸುಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬಿಎಸ್ ವೈ ನೇತೃತ್ವದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸೇರ್ಪಡಯಾಗಲಿದ್ದಾರೆ. ಜೆಡಿಎಸ್ ವರಿಷ್ಠರ ನಡವಳಿಕೆಗಳಿಂದ ಬೇಸತ್ತು ಬಿಜೆಪಿ ಸೇರುತ್ತಿರುವುದಾಗಿ ಜೆಡಿಎಸ್ ಶಾಸಕರು ಹೇಳಿದ್ದಾರೆ.

ಇನ್ನು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆಗಳು ಇಂದು ನಡೆಯುತ್ತಿದ್ದು, ಫೆಬ್ರವರಿ 4ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ, ಫೆಬ್ರವರಿ 4ರ ಪರಿವರ್ತನಾ ಯಾತ್ರೆ ಸಮಾರಂಭದ ಕಾರ್ಯಕ್ರಮ ರೂಪುರೇಷಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿಗಳು, ವಿಭಾಗ ಪ್ರಭಾರಿಗಳು, ಜಿಲ್ಲಾ ಪ್ರಭಾರಿಗಳು ಪಾಲ್ಗೊಂಡಿದ್ದು, ಸಭೆ ಬಳಿಕ ಸಂಜೆ ಕೋರ್ ಕಮಿಟಿ ಸಭೆಯು ನಡೆಯಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್, ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೇರಿದಂತೆ ಪ್ರಮುಖ ನಾಯಕರು ಇಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.S.Yeddyurappa Prakash Javadekar ಉಸ್ತುವಾರಿ ಅಧ್ಯಕ್ಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ