‘ಸಿದ್ದರಾಮಯ್ಯ ಬಜೆಟ್ ಮಂಡಿಸಬಾರದು’



18-01-2018

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರಲು ದೊಡ್ಡ ಸಾಲೇ ಇದೆ, ಮುಂದಿನ ದಿನಗಳಲ್ಲಿ ಇನ್ನು ಹಲವು ನಾಯಕರು ಬಿಜೆಪಿ ಸೇರುತ್ತಾರೆ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ 2017-18ನೇ ಸಾಲಿನ ಬಜೆಟ್ ಹಣದಲ್ಲಿ 40% ರಷ್ಟು ಹಣ ಖರ್ಚು ಮಾಡಿಲ್ಲ. ಇನ್ನು 83 ಸಾವಿರ ಕೋಟಿಯನ್ನು ಒಂದೂವರೆ ತಿಂಗಳಲ್ಲಿ ತಿನ್ನುವ ಷಡ್ಯಂತ್ರ ನಡೆದಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಅಲ್ಲದೇ ಗುತ್ತಿದಾರರ ಜೊತೆ ಶಾಮೀಲಾಗಿ ದುಡ್ಡು ತಿನ್ನೋದಕ್ಕೆ ಹೊರಟಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಬಾರದು, ಲೇಖಾನುದಾನ ಮಾತ್ರ ಮಂಡಿಸಬೇಕು, ಈಗ ಬಜೆಟ್ ಮಂಡಿಸುವ ಹಾಗಿಲ್ಲ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.S.Yeddyurappa Budget ಲೇಖಾನುದಾನ ಷಡ್ಯಂತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ