ಕಾಂಗ್ರೆಸ್ ವಿರುದ್ಧ ಮುರಳೀಧರ್ ರಾವ್ ಟೀಕೆ

Muralidhar Rao criticizes karnataka Congress

18-01-2018

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 4ರಂದು ನಗರದಲ್ಲಿ ಬಿಜೆಪಿಯ ಬೃಹತ್ ರ‍್ಯಾಲಿ ಏರ್ಪಾಡಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಡಿ.ಮುರಳೀಧರ ರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ರಾಜ್ಯ ವಿಧಾನಭಾ ಚುನಾವಣೆಗೆ ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯ, ಭ್ರಷ್ಟಾಚಾರ, ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯಗಳಾಗಲಿವೆ ಎಂದರು. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೃಷಿ, ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆ, ಮೂಲಸೌಕರ್ಯ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ, ಒಟ್ಟು ಅನುದಾನದ ಶೇಕಡ 37 ರಿಂದ 42ರಷ್ಟು ಮಾತ್ರ ಖರ್ಚು ಮಾಡಿದೆ ಎಂದು ಅವರು ಟೀಕಿಸಿದರು.

ಫಸಲ್ ಭಿಮಾ ಯೋಜನೆಯಡಿ ಮಹಾರಾಷ್ಟ್ರ ಒಂದು ಕೋಟಿ 6 ಲಕ್ಷ ರೈತರಿಗೆ ಪ್ರಯೋಜನ ಕಲ್ಪಿಸಿದೆ. ಆದರೆ ಕರ್ನಾಟಕದಲ್ಲಿ ಕೇವಲ ಹತ್ತು ಲಕ್ಷ 60 ಸಾವಿರ ರೈತರಿಗೆ ಮಾತ್ರ ಈ ಪ್ರಯೋಜನ ತಲುಪಿಸಲಾಗಿದೆ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರಗಳೇ ರೈತರ ಸಾಲ ಮನ್ನಾ ಮಾಡಿದ್ದು, ಕರ್ನಾಟಕದಲ್ಲಿ ಮಾತ್ರ ಈ ವಿಷಯದಲ್ಲಿ ಕೇಂದ್ರದತ್ತ ಬೊಟ್ಟು ಮಾಡಲಾಗುತ್ತದೆ ಎಂದು ಅವರು ದೂರಿದರು. ರಾಜ್ಯದಲ್ಲಿ ಒಟ್ಟು 3 ಸಾವಿರದ 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದ ನಂತರವೂ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ವಲಯದ ಪುನಶ್ಚೇತನಕ್ಕೆ ವಿಶೇಷ ಗಮನಹರಿಸಲಾಗುವುದು ಎಂದು ಮುರಳೀಧರ ರಾವ್ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Muralidhar Rao modi ಮಹಾರಾಷ್ಟ್ರ ಫಸಲ್ ಭಿಮಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ