ಸ್ವಾಮಿನಾಥನ್ ಗೆ 'ಬಸವ ಕೃಷಿ' ಪ್ರಶಸ್ತಿ

Basava Krishi Award for M.S.Swaminathan

18-01-2018

ಬೆಂಗಳೂರು: 2018ನೇ ಸಾಲಿನ ‘ರಾಷ್ಟ್ರ ಮಟ್ಟದ ಬಸವ ಕೃಷಿ ಪ್ರಶಸ್ತಿ’ ಯನ್ನು ಕೃಷಿ ಸಂಶೋಧಕ ಡಾ. ಎಂ.ಎಸ್.ಸ್ವಾಮಿನಾಥನ್ ಅವರಿಗೆ ನೀಡಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಬರುವ 24ನೇ ತಾರೀಕು ಚೆನ್ನೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ರೈತರ ಹಿತರಕ್ಷಣೆಗೆ ಪೂರಕ ಯೋಜನೆಗಳ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ತಾಮ್ರಪತ್ರವನ್ನು ಒಳಗೊಂಡಿರುತ್ತದೆ. ಕಾವೇರಿ ನದಿ ನೀರಿನ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ವಿಚಾರವನ್ನು ಈ ಸಂದರ್ಭದಲ್ಲಿ ಮಂಡಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

M.S.Swaminathan Basava Krishi ಲಿಂಗಾಯತ ಜಗದ್ಗುರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ