ಕೆನರಾ ಬ್ಯಾಂಕ್ ನಲ್ಲಿ ಅಗ್ನಿ ಅವಘಡ

short circuit: Fire caught in Canara Bank

19-01-2018

ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೆನರಾ ಬ್ಯಾಂಕ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿನ ಸಂಗಮ್ ಲಾಡ್ಜ್ ಬಳಿ ಇರುವ ಕೆನರಾ ಬ್ಯಾಂಕ್ ನಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡದ ಎರಡೂ ಅಂತಸ್ತಿನಲ್ಲಿ ಕೆನರಾ ಬ್ಯಾಂಕ್ ಇದ್ದು, ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಆವರಿಸಿದೆ. ಇದರಿಂದ ಬ್ಯಾಂಕ್ನಲ್ಲಿದ್ದ ದಾಖಲೆಗಳು, ಪೀಠೋಪಕರಣಗಳು ಭಸ್ಮವಾಗಿವೆ. ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ಇನ್ನು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

canara Bank circuit ಬ್ಯಾಂಕ್ ಅಗ್ನಿಶಾಮಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ