ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ಆತ್ಮಹತ್ಯೆ

Woman committed suicide in district hospital

19-01-2018

ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸ್ವಾತಿ ಹೊಸಮನಿ(28) ಎಂಬ ಮಹಿಳೆ ಆಸ್ಪತ್ರೆಯ ವಾರ್ಡಿನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಹಿನ್ನೆಲೆ, ಸುರೇಶ್(22) ಎಂಬ ಯುವಕನಿಗೆ ಗ್ರಾಮಸ್ಥರು ಥಳಿಸಿದ್ದರು, ಈ ಸಂದರ್ಭದಲ್ಲಿ ತನ್ನ ಮೇಲೆಯೂ ಗ್ರಾಮಸ್ಥರಿಂದ ಹಲ್ಲೆ ಮಾಡಿದ್ದಾರೆಂದು ಸ್ವಾತಿ ಆರೋಪಿಸಿದ್ದರು. ಇನ್ನು ಈ ಕುರಿತಂತೆ ಅಪ್ರಾಪ್ತ ಬಾಲಕಿಯ ಪೋಷಕರಿಂದ ಯುವಕ ಸುರೇಶ್ ಮತ್ತು ಸ್ವಾತಿ ಹೊಸಮನಿ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯುವಕ ಸುರೇಶ್ ಮತ್ತು ಸ್ವಾತಿ ಹೊಸಮನಿ ಅವರೂ ಸಹ ಗ್ರಾಮಸ್ಥರ ವಿರುದ್ಧ ಪ್ರತಿ ದೂರು ನೀಡಿದ್ದರು. ಹಲ್ಲೆಯ ಬಳಿಕ ಸ್ವಾತಿ ಹೊಸ ಮನಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ದುಪಟ್ಟಾ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide Hospital ಶೌಚಾಲಯ ಅಪ್ರಾಪ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ