ಮಳಖೇಡ ಉತ್ತರಾದಿ ಮಠದಲ್ಲಿ ಕಳ್ಳತನ

Theft in Malkheda uttaradhi Mutt

19-01-2018

ಕಲಬುರಗಿ: ಕಲಬುರಗಿಯ ಮಳಖೇಡದ ಉತ್ತರಾದಿ ಮಠದಲ್ಲಿ ಕಳ್ಳತನ ನಡೆದಿದೆ. ಸುಮಾರು 30 ಕೆಜಿ ಬೆಳ್ಳಿ ವಸ್ತುಗಳು, ಹುಂಡಿ ಮತ್ತಿತರ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡದಲ್ಲಿನ ಉತ್ತರಾದಿ ಮಠದಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಿಂದೆಯೂ ಇದೇ ಮಾದರಿಯಲ್ಲಿ ಕಳ್ಳತನ ನಡೆದಿತ್ತು. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ. ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Robbery Malakheda ಉತ್ತರಾದಿಮಠ ಹುಂಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ